ಎನ್​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿ: ಶಿಕ್ಷಣ ಸಚಿವ ಎಂಸಿ ಸುಧಾಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ (MC Sudhakar) ಮಹತ್ವದ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ (SEP) ರೂಪಿಸಲುಕಾಂಗ್ರೆಸ್ ಸರ್ಕಾರ ಮುಂದಾಗುತ್ತಿರುವ ಬಗ್ಗೆಮಾಹಿತಿ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಎನ್​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ. ಈ ಹಿಂದೆ ತರಾತುರಿಯಲ್ಲಿ ಎನ್​ಇಪಿ ಜಾರಿಗೊಳಿಸಲಾಗಿತ್ತು ಎಂದು ಹೇಳಿದ್ದಾರೆ.

ಅದೇ ರೀತಿ ಕಳೆದ ಹತ್ತು ವರ್ಷಗಳಿಂದ ಉನ್ನತ ಶಿಕ್ಷಣ ಇಲಾಖೆ ಅನುದಾನ ಹೆಚ್ಚಾಗಿಲ್ಲ. ಬಹುತೇಕ ಅನುದಾನ ಸಂಬಳಕ್ಕೆ ಹೋಗುತ್ತದೆ. ಕಾನೂನು ವ್ಯಾಪ್ತಿಯಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಇದೀಗ ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ 32 ವಿಶ್ವವಿದ್ಯಾಲಯಗಳಿವೆ. ಆಯವ್ಯಯದ ಆರು ಶೇಕಡಾ ಅನುದಾನ ಶಿಕ್ಷಣ ಇಲಾಖೆಗೆ ನೀಡಬೇಕು ಎಂದು ಹೇಳಲಾಗುತ್ತದೆ. ಆದರೆ ಹಿಂದಿನ ಸರ್ಕಾರ 5400 ಕೋಟಿ ರೂ. ನೀಡಿತ್ತು. ಬಜೆಟ್​​ನ ಶೇಕಡಾ 1.7 ರಷ್ಟು ಅನುದಾನ ಮಾತ್ರ ಉನ್ನತ ಶಿಕ್ಷಣ ಇಲಾಖೆಗೆ ಬಂದಿದೆ. ಹೀಗಾಗಿ ಕಾನೂನು ವ್ಯಾಪ್ತಿಯಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!