Wednesday, October 5, 2022

Latest Posts

ಸಿಎಂ ಸ್ಥಾನದಿಂದ ಬೊಮ್ಮಾಯಿ ಬದಲಾವಣೆ ಕಾಂಗ್ರೆಸ್‌ ಪರಿಕಲ್ಪನೆ ಅಷ್ಟೇ: ಸಚಿವ ಶಿವರಾಮ ಹೆಬ್ಬಾರ್

ಹೊಸದಿಗಂತ ವರದಿ, ಮುಂಡಗೋಡ:
ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಎಂಬುವುದು ಕಾಂಗ್ರೆಸ್ ಭ್ರಮೆಯಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಶನಿವಾರ ನಗರದ ಪಪಂ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತ್ರತ್ವದಲ್ಲಿ ಅವರ ನಾಯಕತ್ವದಲ್ಲಿ ಅವಧಿಯನ್ನು ಹಾಗೂ ಚುನಾವಣೆ ಮುಗಿಸಲಿದ್ದೇವೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿರುವವರೆಲ್ಲ ನಿದ್ದೆಯ ಮಂಪರಿನಲ್ಲಿ ಮಾತನಾಡುತ್ತಿದ್ದಾರೆ. ಅದು ಕಾಂಗ್ರೆಸ್‌ ಪರಿಕಲಪನೆಯಷ್ಟೇ. ಯಾವ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಬೊಮ್ಮಾಯಿಯವರ ಬದಲಾವಣೆ ಇಲ್ಲ. ಈಗಾಗಲೇ ರಾಷ್ಟ್ರೀಯ ನಾಯಕತ್ವ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನಾಯಕರು ಬಸವರಾಜ್ ಬೊಮ್ಮಾಯಿ ಅವರು ಮುಂದುವರೆಯುವ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!