ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಕೋಲಾರ:
ರಾಜ್ಯದಲ್ಲಿ ಸಿಎಂ ಬದಲಾವಣೆಯ ಕುರಿತು ಊಹಾಪೋಹ ಮತ್ತು ಚರ್ಚೆಗಳಾಗುತ್ತಿವೆ, ಆದರೆ, ನಮ್ಮ ಮಟ್ಟದವರೆಗೂ ಆ ರೀತಿಯ ಯಾವುದೇ ವಿಚಾರಗಳು ನನ್ನ ಗಮನಕ್ಕೆ ಬಂದಿಲ್ಲ ಮತ್ತು ಹೈಕಮಾಂಡ್ ಯಾವ ತೀರ್ಮಾನ ಕೈಗೊಂಡರೂ ಬದ್ಧರಾಗಿರುತ್ತೇವೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ನಗರ ಹೊರವಲಯದ ತೋಟಗಾರಿಕೆ ಮಹಾ ವಿದ್ಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಕೊರೊನಾ ಸೇರಿದಂತೆ ಎಲ್ಲ ಸಮಯದಲ್ಲಿಯೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.
ಆದರೆ, ವಿರೋಧ ಪಕ್ಷದವರಂತೆ ಅನೇಕರು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯಕ್ಕೆ ಬದಲಾವಣೆಯ ವಿಚಾರವಿಲ್ಲ. ಹೈಕಮಾಂಡ್ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.
ಬಿ.ಎಸ್.ಯಡಿಯೂರಪ್ಪ ಅವರು ಪೂರ್ಣಾವಧಿಯವರೆಗೂ ಮುಖ್ಯಮಂತ್ರಿಯಾಗಿರುವುದಕ್ಕೆ ನಾನು ಸೇರಿದಂತೆ ಯಾರದೂ ಅಭ್ಯಂತರವಿಲ್ಲ
ಎಂದು ಅಭಿಪ್ರಾಯಿಸಿದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಅವೆಲ್ಲವೂ ಸತ್ಯಕ್ಕೆ ದೂರವಾದ ವಿಚಾರ. ಈಗ ಸಿಎಂ ಬದಲಾವಣೆ ಎಂದು 5-6 ಮಂದಿ ಹೆಸರುಗಳು ಹುಟ್ಟಿಕೊಂಡಿರುವಂತೆಯೇ ಆಡಿಯೋ ಸಹ ಸುಳ್ಳಿನ ಕಂತೆಯಾಗಿದೆ ಎಂದು ತಿಳಿಸಿದರು.