Saturday, November 15, 2025

ಬಿಜೆಪಿ ಪಾಳಯದಲ್ಲಿ ಬದಲಾವಣೆ ಫೈರ್! ಆ ವದಂತಿಗೆ ಬೊಮ್ಮಾಯಿ ಕೊಟ್ಟ ಉತ್ತರ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನವೆಂಬರ್‌ನಲ್ಲಿ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ಊಹಾಪೋಹಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಆ ರೀತಿ ಪ್ರಶ್ನೆಯೇ ಇಲ್ಲ. ಯಾರು ಹೇಳಿದ್ದು ನಿಮಗೆ?” ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಅವರು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲಗಳ ಬಗ್ಗೆ ಟೀಕಿಸುತ್ತಾ, “ಆಡಳಿತ ಪಕ್ಷದಲ್ಲೇ ಗೊಂದಲವಿದ್ದು ದಿನಕ್ಕೊಂದು ಹೇಳಿಕೆ ಬರುತ್ತಿವೆ” ಎಂದಿದ್ದಾರೆ. ಅಲ್ಲದೆ, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬುದು ಅವರ ಭ್ರಮೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

error: Content is protected !!