Thursday, September 4, 2025

ಮಳೆಗೆ ತಕ್ಕಂತೆ ಪ್ಲ್ಯಾನ್‌ ಬದಲಾಯಿಸಿ: ಈ ವಾರವಿಡೀ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ವಾರದ ಕಾಲ ನಿರಂತರ ಗುಡುಗು ಸಹಿತ ಭಾರೀ ಮಳೆ ಮತ್ತು ಮೋಡ ಕವಿದ ವಾತಾವರಣ ಇರುತ್ತದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರದವರೆಗೆ ಪ್ರತಿದಿನ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿ ಬಿರುಸಿನಿಂದ ಕೂಡಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 27.7 ಡಿಗ್ರಿ ಸೆಲ್ಸಿಯಸ್ ಮತ್ತು 2.8 ಮಿಮೀ ಮಳೆಯಾಗಿದೆ. ಎರಡೂ ಪ್ರದೇಶಗಳಲ್ಲಿ ತುಂತುರು ಮಳೆ ಮತ್ತು ಹಗುರ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ