ಹೊಸದಿಗಂತ ವರದಿ ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸುಮಾರು ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೆ.ಲಕ್ಷ್ಮೀಪ್ರಿಯಾ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ 2016ನೇ ಬ್ಯಾಚಿನ ಐ.ಎ.ಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ಧೆಗೆ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ವಿಭಾಗದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆ.ಲಕ್ಷ್ಮೀಪ್ರಿಯಾ ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.



