Thursday, August 11, 2022

Latest Posts

ಗಣೇಶೋತ್ಸವ ಮಾರ್ಗಸೂಚಿಯಲ್ಲಿ ಮತ್ತೆ ಬದಲಾವಣೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗಣೇಶೋತ್ಸವ ಆಚರಣೆಗೆ ವಿಧಿಸಲಾಗಿದ್ದ ಷರತ್ತುಗಳನ್ನು ಬದಲಿಸುವಂತೆ ಆಗ್ರಹಿಸಿ ಗಣೇಶಮೂರ್ತಿ ತಯಾರಕರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಬೆಂಗಳೂರು ಬಿಬಿಎಂಪಿ ಮಣಿದಿದ್ದು, ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ.
ಬೇಡಿಕೆ ಬಂದಲ್ಲಿ ವಾರ್ಡ್ ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ನೀಡುವುದಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಭರವಸೆ ನೀಡಿದ್ದಾರೆ. ಅಲ್ಲದೇ ಗಣೇಶೋತ್ಸವಕ್ಕೆ ಮೂರು ದಿನಗಳ ಆಚರಣೆ ನಿಯಮ, ಗಣೇಶ ಮೂರ್ತಿ ಎತ್ತರದ ಬಗ್ಗೆಯೂ ವಿಧಿಸಿದ್ದ ಷರತ್ತುಗಳನ್ನು ಪಾಲಿಕೆ ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಧರಣಿ ವಾಪಸ್ ಪಡೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss