ಬದಲಾಗುತ್ತಿದೆ ಹವಾಮಾನ: ರಾಜ್ಯದಲ್ಲಿ ಮತ್ತಷ್ಟು ತೀವ್ರ ಮಳೆಯ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹವಾಮನಾ ಇಲಾಖೆ ಮೂಲಗಳ ಪ್ರಕಾರ ದೇಶದ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದು,  ಕರ್ನಾಟಕ ಸೇರದಂತೆ ಮುಂಬೈ, ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸಾಗಲಿದೆ. ಈ ಬೆಳವಣಿಗೆ ಜು.೧೯ರ ತನಕ ಮುಂದುವರಿಯಲಿದೆ.
ಎಲ್ಲೆಲ್ಲಿ ಮಳೆ?
ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದೆ.
ಮತ್ತೆ ವಾಯುಭಾರ ಕುಸಿತ: 
ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದ ಮೇಲ್ಮೈ ಸುಳಿಗಾಳಿ ಇನ್ನೂ ಪ್ರಬಲವಾಗಿಯೇ ಮುಂದುವರಿದಿದ್ದು, ರಾಜ್ಯದ ಪಶ್ಚಿಮ ಘಟ್ಟಗಳತ್ತ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಚಲಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!