March 30, 2026
Monday, March 30, 2026
spot_img

ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮ*ಹತ್ಯೆಗೆ ಶರಣು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮ*ಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ.

ಮೃತ ಶಿವಕುಮಾರ್ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೊ ಕಾಲ್ ಮಾಡಿ, ನನಗೆ ಜೀವನ ಸಾಕಾಗಿದೆ, ಸಾಯುತ್ತೀನಿ ಎಂದು ಹೇಳಿ ಫೆ.17ರಂದು ಲಾಡ್ಜ್‌ವೊಂದರಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರ ಬಳಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.

ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾಡ್ಜ್‌ನ ಸಿಸಿಟಿವಿ ದೃಶ್ಯಾವಳಿ ಹಾಗೂ ಶಿವಕುಮಾರ್ ಅವರ ಮೊಬೈಲ್ ಫೋನ್ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !