ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಇಂದು ಬೆಳ್ಳಿಹಬ್ಬದ ಸಂಭ್ರಮ. ಸಂಜೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಯಾವುದೇ ಸಿಎಂ ಭಾಗವಹಿಸಿದರೂ ಅವರು ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಮೂಡನಂಬಿಕೆ ಇದೆ. ಈ ಮೌಢ್ಯ ಮುರಿಯಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದು, ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.
1997ರಲ್ಲಿ ಸರ್ಕಾರದ ವತಿಯಿಂದ ಕಿತ್ತೂರು ಉತ್ಸವಕ್ಕೆ ಅಂದಿನ ಸಿಎಂ ಜೆ.ಎಚ್.ಪಟೇಲ್ ಚಾಲನೆ ನೀಡಿದ್ದರು. ಅದಾದ ನಂತರ ಇದೇ ಮೊದಲ ಬಾರಿಗೆ ಸಿಎಂ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ ಕಿತ್ತೂರು ಉತ್ಸವಕ್ಕೆ ಬಂದಿದ್ದಾರೆ. ಆದರೆ ಉತ್ಸವಕ್ಕೆ ಚಾಲನೆ ನೀಡಿಲ್ಲ.
ಕಿತ್ತೂರಿಗೆ ಬಂದು ಹೋದ ರಾಜಕೀಯ ಗಣ್ಯರಿಗೆ ಉತ್ತಮ ಸ್ಥಾನ ದೊರೆಯುತ್ತದೆ ಎನ್ನುವುದು ಅಲ್ಲಿನ ಜನರ ನಂಬಿಕೆ. ಸಿಎಂ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ, ಎಚ್.ಡಿ.ದೇವೇಗೌಡರು ಕೂಡ ಕಿತ್ತೂರಿಗೆ ಭೇಟಿ ನೀಡಿದ್ದಾರೆ.