ಹೊಸದಿಗಂತ ಆನ್ಲೈನ್ ಡೆಸ್ಕ್:
ಆಟಿಕೆಗಳ ತಯಾರಿಕೆಯಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಪ್ರಖ್ಯಾತವಾಗಿದ್ದು, ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ವರ್ಚುಯಲ್ ಕಾನ್ಫರೆನ್ಸ್ ಮೂಲಕ ಆಟಿಕೆ ಮೇಳಕ್ಕೆ ಚಾಲನೆ ನೀಡಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಚನ್ನಪಟ್ಟಣದ ಆಟಿಕೆ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು. ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಜಗತ್ತಿನ ಎಲ್ಲಾ ಮಕ್ಕಳ ಮುಖದಲ್ಲೂ ನಗು ತರಬೇಕು ಎಂದಿದ್ದಾರೆ.
ಚನ್ನಪಟ್ಟಣದ ಬೊಂಬೆಯನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿಗೆ ತರಲು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು. ಇದಕ್ಕೆ ಬೇಕಾದ ಸಹಕಾರವನ್ನು ಸರ್ಕಾರ ಸಹ ನೀಡುತ್ತದೆ. ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಐಟಿ ವೃತ್ತಿಪರರ ಮೂಲಕ ಚನ್ನಪಟ್ಟಣದ ಬೊಂಬೆ ತಯಾರಕರಿಗೆ ಕಾರ್ಯಾಗಾರ ಏರ್ಪಡಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.