ಚನ್ನಪಟ್ಟಣ ಬೈ ಎಲೆಕ್ಷನ್: 29 ಕೋಟಿ ಮೌಲ್ಯದ ಮದ್ಯ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಉಪಚುನಾವಣೆ ನಡೆಯಲಿದೆ .ಇದರ ನಡುವೆ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಒಂದು ತಿಂಗಳಲ್ಲಿ ಒಟ್ಟು 29 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚನ್ನಪಟ್ಟಣ ಚುನಾವಣೆ ಘೋಷಣೆಯಾದ ಬಳಿಕ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ಇದುವರೆಗೆ 151 ಪ್ರಕರಣಗಳನ್ನು ಅಬಕಾರಿ ಇಲಾಖೆ ದಾಖಲಿಸಿಕೊಂಡಿದೆ.

ಮದ್ಯದ ಜೊತೆಗೆ ಮೂರು ವಾಹನಗಳನ್ನು ಕೂಡ ಜಪ್ತಿ ಮಾಡಿಕೊಳ್ಳಲಾಗಿದೆ.ದಾಖಲೆ ಹಾಗೂ ಪರವಾನಿಗೆ ಇಲ್ಲದೆ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಯಾವುದೇ ದಾಖಲೆ ಹಾಗೂ ಪರವಾನಿಗೆಲ್ಲದೆ ಸಂಗ್ರಹಿಸಿಟ್ಟಿದ್ದ ಮಧ್ಯವನ್ನು ಜಪ್ತಿ ಮಾಡಿಕೊಂಡಿರುವ ಕುರಿತು ಅಬಕಾರಿ ಇಲಾಖೆ ಮಾಹಿತಿ ನೀಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!