ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಗುರುವಾರವಷ್ಟೇ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ನಾಯಕರ ಮುಂದೆ ನಿಖಿಲ್ ಕುಮಾರಸ್ವಾಮಿ ತಮ್ಮ ಶಕ್ತಿ ಪ್ರದರ್ಶಿಸಿದರು. ನಂತರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ನಿಖಿಲ್ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಚನ್ನಪಟ್ಟಣ ಕೆಂಗಲ್ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮೊಮ್ಮಗನ ಭವಿಷ್ಯಕ್ಕಾಗಿ ಪ್ರಾರ್ಥಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೆಂಗಳೂರಿನ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.