ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್ನ ಫಲಿತಾಂಶ ನಾಳೆ ಹೊರ ಬೀಳಲಿದೆ.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಣೆ ಹಿನ್ನೆಲೆ ಜಿಲ್ಲೆಯಲ್ಲಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಆದೇಶ ಹೊರಡಿಸಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಬಹಿರಂಗ ಸಭೆ, ಸಾರ್ವಜನಿಕ ಭಾಷಣ ಮತ್ತು ಸಂಭ್ರಮಾಚರಣೆಗೆ ಅವಕಾಶ ಇಲ್ಲ. 5ಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ರಾಮನಗರದ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದ್ದು, ಆಯೋಗ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ.
ಚನ್ನಪಟ್ಟಣ ನಿಖಿಲ್ ಕುಮಾರಸ್ವಾಮಿ ಮತ್ತು ಸಿಪಿ ಯೋಗೇಶ್ವರ್ ನಡುವೆ ಭರ್ಜರಿ ಪೈಪೋಟಿ ಇದೆ.