ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್: ಹೆಚ್‌ಡಿ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿ ತೋಟದ ಮನೆಯಲ್ಲಿ ಚನ್ನಪಟ್ಟಣ ಭಾಗದ ಮುಖಂಡರು, ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ (JDS) ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ. ಎಲ್ಲರು ಒಟ್ಟಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ ಎಂದರು.

ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಎಂದು 95% ನಾಯಕರು, ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಈಗ ಇರುವ ಸನ್ನಿವೇಶ ನೋಡಬೇಕು. ಏನೇನು ಬೆಳವಣಿಗೆಗಳು ಇವೆ ಎಂದು ನೋಡಬೇಕು. ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲಾ ಪಕ್ಷಗಳು ಒಂದಾಗಿ ಸೋಲಿಸಿದರು. ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲಾ ಒಂದಾಗಿದ್ದರು. ಅವೆಲ್ಲಾ ನೋಡಿದ್ದೇವೆ. ಚನ್ನಪಟ್ಟಣದಲ್ಲಿ ನನಗೆ ಎನ್‌ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್‌ಡಿಎ ಅಭ್ಯರ್ಥಿ ಗೆಲುವು ಕಾಣಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!