ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.
ಈಗಾಗಲೇ ಮತದಾನ ಆರಂಭವಾಗಿದ್ದು, ಮತದಾರರದಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬೆಳಗ್ಗೆ ಕಡಿಮೆ ಜನರು ಬರುತ್ತಾರೆ ಎಂದು, ಆಫೀಸ್ ಹಾಗೂ ಕೆಲಸಕ್ಕೆ ತೆರಳುವವರು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದಾರೆ.