ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬೈ ಎಲೆಕ್ಷನ್ ಪಾಲಿಟಿಕ್ಸ್ ಜೋರಾಗಿದೆ. ಅದ್ರಲ್ಲೂ ಚನ್ನಪಟ್ಟಣ ವಿಚಾರವೇ ಹೆಚ್ಚು ಸದ್ದು ಮಾಡ್ತಿದೆ. ಮೈತ್ರಿ ಟಿಕೆಟ್ ವಿಚಾರವಾಗಿ ಬಿಜೆಪಿ-ಜೆಡಿಎಸ್ ನಡುವೆ ಇನ್ನೂ ಒಮ್ಮತ ಮೂಡಿಲ್ಲ.
ಇತ್ತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಯಾಗಿರುವ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಭಾನುವಾರ ಸಂಜೆ 5:30ರ ವಿಮಾನದಲ್ಲಿ ದೆಹಲಿಗೆ ಹೊರಟಿದ್ದು, ಸೋಮವಾರ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಚರ್ಚೆ ನಂತರ ಟಿಕೆಟ್ ಯಾರಿಗೆ ನೀಡಬಹುದು ಎನ್ನುವ ವಿಷಯ ಬಹುತೇಕ ಕ್ಲಾರಿಟಿ ಸಿಗಲಿದೆ.