ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಇದಲ್ಲದೆ, ದೇವಸ್ಥಾನದ 50 ಮೀಟರ್ ವ್ಯಾಪ್ತಿಯಲ್ಲಿ ಯಾರೂ ರೀಲ್ಸ್ ಗಳನ್ನು ಮಾಡಬಾರದು ಎಂಬ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ.
ಕೇದಾರನಾಥ, ಬದರಿನಾಥ್, ಯಮುನೋತ್ರಿ ಮತ್ತು ಗಂಗೋತ್ರಿಯಲ್ಲಿ ವಿಐಪಿ ದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ನಿರ್ಧರಿಸಲಾಗಿದೆ.
ಹರಿದ್ವಾರ ಮತ್ತು ರಿಷಿಕೇಶದಲ್ಲಿ ಆಫ್‌ಲೈನ್ ನೋಂದಣಿ ಮೇ 19 ಭಾನುವಾರದವರೆಗೆ ಮುಚ್ಚಿರುತ್ತದೆ ಎಂದು ಮುಖ್ಯ ಕಾರ್ಯದರ್ಶಿ ರಾಧಾ ರತುರಿ ತಿಳಿಸಿದ್ದಾರೆ. ದೇವಾಲಯಗಳ 50 ಮೀಟರ್ ವ್ಯಾಪ್ತಿಯಲ್ಲಿ ವಿಡಿಯೋಗ್ರಫಿ ಮತ್ತು ಸಾಮಾಜಿಕ ಮಾಧ್ಯಮ ರೀಲ್‌ಗಳ ಮೇಕಿಂಗ್ ಮೇಲೆ ನಿಷೇಧ ಹೇರಲಾಗಿದೆ.