ಚಾರ್​ ಧಾಮ್ ಯಾತ್ರೆ: 15 ದಿನದಲ್ಲಿ 50ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇ 10 ರಂದು ಸುಮಾರು 15 ದಿನಗಳ ಹಿಂದೆ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಪ್ರಾರಂಭವಾದಾಗಿನಿಂದ 50 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಪುಣ್ಯಕ್ಷೇತ್ರಗಳನ್ನು ಒಳಗೊಂಡಿರುವ ತೀರ್ಥಯಾತ್ರೆಗೆ ಪ್ರತಿದಿನ ಸರಾಸರಿ 70,000 ಯಾತ್ರಿಕರು ಬರುತ್ತಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ, “ಇದುವರೆಗೆ 52 ಚಾರ್ ಧಾಮ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಗಂಗೋತ್ರಿಯಲ್ಲಿ ಮೂವರು, ಯಮುನೋತ್ರಿಯಲ್ಲಿ 12, ಬದರಿನಾಥದಲ್ಲಿ 14 ಮತ್ತು ಕೇದಾರನಾಥದಲ್ಲಿ 23 ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!