ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿತ ಪ್ರಮಾಣ ನಿಯಂತ್ರಣಕ್ಕೆ ಬಾರದ ಕಾರಣ ಉತ್ತರಾಖಂಡ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ಮುಂದೂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಬೆನ್ನಲ್ಲೇ ಸರ್ಕಾರಿ ವಕ್ತಾರ ಮತ್ತು ಕ್ಯಾಬಿನೆಟ್ ಸಚಿವ ಸುಬೋಧ್ ಯುನಿಯಾಲ್, ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆ ಚಾರ್ ಧಾಮ್ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕೊರೋನಾ ನೆಗೆಟಿವ್ ವರದಿ ಹೊಂದಿರುವ ಚವೋಲಿ, ರುದ್ರಪ್ರಯಾಗ್ ಹಾಗೂ ಉತ್ತರಕಾಶಿ ಜಿಲ್ಲೆಗಳಲ್ಲಿನ ಜನರಿಗೆ ಮಾತ್ರ ಚಾರ್ ಧಾಮ್ ಯಾತ್ರೆಗೆ ಅವಕಾಶ ನೀಡುವುದಾಗಿ ಘೋಷಿಸಿದ್ದರು. ಆದರೆ ಇದೀಗ ಚಾರ್ ಧಾಮ್ ಯಾತ್ರೆಯನ್ನು ಮುಂದೂಡಲಾಗಿದೆ.
ಉತ್ತರಾಖಂಡದಲ್ಲಿ ಜೂನ್ 22ರವರೆಗೆ ಕೊರೋನಾ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ವಾರದಲ್ಲಿ ಮೂರು ದಿನ ಮಾತ್ರ ಮಾರುಕಟ್ಟೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.