Thursday, August 11, 2022

Latest Posts

ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್​​ಶೀಟ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್​​ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.
ಅಶ್ಲೀಲ ಚಿತ್ರ ಪ್ರಕರಣ ವಿಚಾರವಾಗಿ ತನಿಖೆ ನಡೆಸುತ್ತಿರುವ ಮುಂಬೈ ಅಪರಾಧ ವಿಭಾಗದ ಪ್ರಾಪರ್ಟಿ ಸೆಲ್ ಬುಧವಾರ 1500 ಪುಟಗಳ ಪೂರಕ ಚಾರ್ಜ್ ಶೀಟ್ ಅನ್ನು ಎಸ್ ಪ್ಲನೇಡ್ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ಚಾರ್ಜ್ ಶೀಟ್ ನಲ್ಲಿ ರಾಜ್ ಕುಂದ್ರಾ ಪತ್ನಿ ಶಿಲ್ಪಾಶೆಟ್ಟಿ ಮತ್ತು ಈ ಹಿಂದೆ ಕಾಮಸೂತ್ರ 3ಡಿ ಚಿತ್ರದ ನಟಿ ಶೆರ್ಲಿನ್ ಚೋಪ್ರಾ, ಸೆಜಲ್ ಶಾ, ಹಲವು ಮಾಡೆಲ್​ಗಳು ಸೇರಿದಂತೆ ಸುಮಾರು 43 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕುಂದ್ರಾ ಕಂಪನಿಯ ಉದ್ಯೋಗಿಗಳ ಹೇಳಿಕೆಗಳನ್ನೂ ಆರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪ ಪಟ್ಟಿಯಲ್ಲಿ ಪ್ರಕರಣದಲ್ಲಿ ಬೇಕಾಗಿರುವ ಇಬ್ಬರು ಆರೋಪಿಗಳ ಹೆಸರೂ ಇದೆ ಎನ್ನಲಾಗಿದೆ.
ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳನ್ನು ನಿರ್ಮಿಸುತ್ತಿರುವ ಆರೋಪದಲ್ಲಿ ಜುಲೈ 19ರಂದು ಇತರ 11 ಮಂದಿಯೊಂದಿಗೆ ಬಂಧಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss