ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಆರೋಪಿ ದರ್ಶನ್ ಮತ್ತು ತಂಡದ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ದಾಖಲಿಸಲು ಸಿದ್ಧರಾಗಿದ್ದಾರೆ. ಇಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವುದು ಅನುಮಾನ ಎನ್ನಲಾಗಿದೆ.
ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಪೊಲೀಸರು ವರದಿ ನೀಡಲು ಸಿದ್ಧತೆ ನಡೆಸಿದ್ದಾರೆ. ಕೊಲೆ ಪ್ರಕರಣದಲ್ಲಿ ಡಿ ಗ್ಯಾಂಗ್‌ನ 14 ಆರೋಪಿಗಳ ಮೇಲೆ ಆರೋಪ ಹೊರಿಸಲಾಗಿದ್ದು, ಸಾಕ್ಷ್ಯ ನಾಶದ ಭಾಗವಾಗಿ ಉಳಿದ ಮೂವರ ವಿರುದ್ಧ ಆರೋಪ ಹೊರಿಸಲಾಗುವುದು ಎಂದು ತಿಳಿದುಬಂದಿದೆ.