Friday, June 2, 2023

Latest Posts

ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ವಿಧಿವಶ: ನಳಿನ್‍ಕುಮಾರ್ ಕಟೀಲ್ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ವಿಧಿವಶರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಪೂಜ್ಯರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಕರ್ನಾಟಕದ ಜೈನ ಸಮುದಾಯದ ಹಿರಿಯ ಸ್ವಾಮೀಜಿಗಳಾಗಿದ್ದ ಶ್ರೀಗಳು ಸಂಸ್ಕೃತ, ಕನ್ನಡದಲ್ಲಿ ಪಾಂಡಿತ್ಯ ಹೊಂದಿದ್ದರು. ಜೈನ ತತ್ವಶಾಸ್ತ್ರದಲ್ಲಿಯೂ ಅಪಾರ ಪಾಂಡಿತ್ಯ ಪಡೆದಿದ್ದಾರೆ. ಜೈನರ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಶ್ರವಣಬೆಳಗೊಳದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಇವರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಯುತ್ತಿತ್ತು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!