ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ವಿಧಿವಶರಾಗಿದ್ದ ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಹಾಸನ ಜಿಲ್ಲೆ ಶ್ರವಣಬೆಳಗೊಳದ ಜೈನಮಠದ ಚಂದ್ರಗಿರಿ ತಪ್ಪಲಿನಲ್ಲಿ ಸೂರ್ಯಾಸ್ತಕ್ಕೂ ಮುನ್ನ ಸ್ವಾಮೀಜಿ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು.
ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.