ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಚೌನಾ ಮೇನ್ ಅವರು ಸತತ ಎರಡನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಟಾನಗರದಲ್ಲಿ ನಡೆದ ಸಮಾರಂಭದಲ್ಲಿ ಪೆಮಾ ಖಂಡು ಅವರು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಅರುಣಾಚಲ ಪ್ರದೇಶದ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ (ನಿವೃತ್ತ) ಅವರು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಒಟ್ಟು 11 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಿದರು.