ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ (Chaitra) ಮತ್ತು ಇತರೆ ಆರು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ (Bangalore) 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇಂದು ಚೈತ್ರಾ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ರಮೇಶ್, ಚನ್ನನಾಯ್ಕ್, ಧನರಾಜ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್ಗೆ ಸೂಚನೆ ನೀಡಿ ವಿಚಾರಣೆಯನ್ನು ಸೆ.26ಕ್ಕೆ ಮುಂದೂಡಿತು.