ಚೆಕ್ ಬೌನ್ಸ್ ಪ್ರಕರಣ: ಮಾಜಿ ಸಚಿವನ ಪುತ್ರನಿಗೆ 6 ತಿಂಗಳ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ದಿ. ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಪುತ್ರ ನರಸಿಂಹಮೂರ್ತಿಗೆ ಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಪ್ರಕಾಶ್ ಕುಮಾರ್ ಎಂಬುವವರ ಪುತ್ರಿಗೆ ಸೀಟ್ ಕೊಡಿಸಲು ನರಸಿಂಹಮೂರ್ತಿ 45 ಲಕ್ಷ ರೂ.ಹಣವನ್ನು ಪಡೆದಿದ್ದರು. ಮೆಡಿಕಲ್ ಸೀಟ್ ಸಿಗದ ಕಾರಣ 45 ಲಕ್ಷ ರೂ.ಗೆ ಚೆಕ್ ನೀಡಿದ್ದರು. ಆದರೆ ಈ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜೆ.ನರಸಿಂಹಸ್ವಾಮಿ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.ಇಂದು ವಿಚಾರಣೆ ನಡೆಸಿದ ಕೋರ್ಟ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ಶಿಕ್ಷೆ ವಿಧಿಸಿ ಆದೇಶಿಸಿದೆ. ಜೆ.ನರಸಿಂಹಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ 2 ತಿಂಗಳಲ್ಲಿ 45 ಲಕ್ಷ ಹಣವನ್ನು ಹಿಂದಿರುಗಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!