September 16, 2026
Wednesday, September 16, 2026
spot_img

ಚೆಕ್ ಬೌನ್ಸ್ ಪ್ರಕರಣ: ರಾಜ್‌ಪಾಲ್ ಯಾದವ್‌ಗೆ ಜೈಲು, ಪತ್ನಿಗೂ ಬಿತ್ತು ಭಾರೀ ದಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಹಿನ್ನಡೆ ಉಂಟುಮಾಡಿದೆ. ಅವರ ವಿರುದ್ಧ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಜೈಲು ಶಿಕ್ಷೆ ಹಾಗೂ ಪರಿಹಾರ ಮೊತ್ತ ಪಾವತಿಸುವಂತೆ ಆದೇಶಿಸಿದೆ.

ಜೈಲು ಶಿಕ್ಷೆ ಎತ್ತಿಹಿಡಿದ ಕೋರ್ಟ್

ನಟನ ವಿರುದ್ಧ ದಾಖಲಾಗಿದ್ದ ಏಳು ಪ್ರಕರಣಗಳಲ್ಲಿ ತಲಾ ಮೂರು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ನ್ಯಾಯಾಲಯ ದೃಢಪಡಿಸಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿದ್ದು, ಪ್ರತಿ ಪ್ರಕರಣದಲ್ಲೂ ದೂರುದಾರರಿಗೆ ಪರಿಹಾರ ಮೊತ್ತ ಪಾವತಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ:

ಪತ್ನಿಗೂ ಪರಿಹಾರ ಪಾವತಿ ಸೂಚನೆ

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್‌ಪಾಲ್ ಯಾದವ್ ಅವರ ಪತ್ನಿ ರಾಧಾ ಯಾದವ್ ಅವರಿಗೂ ನ್ಯಾಯಾಲಯ ಪರಿಹಾರ ಮೊತ್ತ ಪಾವತಿಸಲು ಆದೇಶಿಸಿದೆ. ಈ ಹಿಂದೆ ನಟ ಪಾವತಿಸಿದ್ದ ಮೊತ್ತವನ್ನು ಅಂತಿಮ ಲೆಕ್ಕದಲ್ಲಿ ಹೊಂದಾಣಿಕೆ ಮಾಡಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಮೇಲ್ಮನವಿಗೆ ಎರಡು ತಿಂಗಳ ಅವಕಾಶ

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್‌ಪಾಲ್ ಯಾದವ್ ಅವರಿಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಆ ಅವಧಿಯವರೆಗೆ ಶಿಕ್ಷೆ ಜಾರಿಗೆ ತಾತ್ಕಾಲಿಕ ತಡೆ ನೀಡಲಾಗಿದ್ದು, ಮುಂದಿನ ಬೆಳವಣಿಗೆಗಳು ಸುಪ್ರೀಂ ಕೋರ್ಟ್‌ನ ತೀರ್ಪಿನ ಮೇಲೆ ಅವಲಂಬಿತವಾಗಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !