Monday, August 8, 2022

Latest Posts

300 ಲಕ್ಷ ರೂ. ವೆಚ್ಚದಲ್ಲಿ ಕೋಡಿ ಕಾಲುವೆಗೆ ಚೆಕ್ ಡ್ಯಾಮ್, ಪೈಪ್ ಲೈನ್: ಶಾಸಕ ಕೆ.ಬಿ. ಅಶೋಕ ನಾಯ್ಕ ಶಂಕುಸ್ಥಾಪನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಶಿವಮೊಗ್ಗ:

ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವಕಾತಿ ಕೊಪ್ಪ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆ ವತಿಯಿಂದ 300 ಲಕ್ಷ ರೂ. ವೆಚ್ಚದಲ್ಲಿ ಊರ ಮುಂದಿನ ಕೆರೆಯ ಕೋಡಿ ಕಾಲುವೆಗೆ ಚೆಕ್ ಡ್ಯಾಮ್ ನಿರ್ಮಿಸಿ, ಪೈಪ್ ಲೈನ್ ಮೂಲಕ ಗೆಜ್ಜೆನಹಳ್ಳಿಯ ಎರಡು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಾಸಕ ಕೆ.ಬಿ. ಅಶೋಕ ನಾಯ್ಕ ಶಂಕುಸ್ಥಾಪನೆ ನೆರವೇರಿಸಿದರು.
ಕೊಟೆಗಂಗೂರು ಗ್ರಾಮ ಪಂಚಾಯತ ಉಪಾಧ್ಯಕ್ಷ ವಿಜಯ್ ಕುಮಾರ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೃಷ್ಣಮೂರ್ತಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಪ್ರಕಾಶ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕಿರಣ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss