ಮದುವಣಗಿತ್ತಿಯಂತೆ ಝಗಮಗಿಸುತ್ತಿರುವ ಮಂದಿರದ ಅದ್ಭುತ ಫೋಟೋಗಳು ಇಲ್ಲಿವೆ ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐತಿಹಾಸಿಕ ಅಯೋಧ್ಯೆಯಲ್ಲಿ ಶ್ರೀ ರಾಮಲಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಾಗಿದೆ. ಮಧ್ಯಾಹ್ನ 12:20ಕ್ಕೆ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು, ರಮಾನಂದರ ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇಶದ ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕಾಗಿ ಅಯೋಧ್ಯಾ ನಗರವನ್ನು ವಧುವಿನಂತೆ ಅಲಂಕರಿಸಲಾಗಿದೆ. ನಗರದ ರಸ್ತೆಗಳಲ್ಲಿಯೂ ರಾಮನ ಘೋಷಗಳು ಮೊಳಗಿದವು.

ಹೊಸದಾಗಿ ನಿರ್ಮಿಸಲಾದ ರಾಮಮಂದಿರವು ಪ್ರಮುಖ ಆಕರ್ಷಣೆಯಾಗಿದೆ. ರಾಮ ಮಂದಿರವು 380 ಅಡಿ ಉದ್ದ, 250 ಅಡಿ ಅಗಲ ಮತ್ತು 161 ಅಡಿ ಎತ್ತರ ಮತ್ತು 392 ಕಂಬಗಳನ್ನು ಹೊಂದಿದೆ. 44 ಬಾಗಿಲುಗಳು ರಾಮಮಂದಿರದ ಪ್ರಮುಖ ಆಕರ್ಷಣೆಯಾಗಿದೆ.

ಜನವರಿ 16 ರಿಂದ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಯ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿವೆ, ಅಯೋಧ್ಯೆ ಮಾತ್ರವಲ್ಲದೆ ದೇಶದ ಎಲ್ಲ ಭಾಗಗಳಲ್ಲಿ ರಾಮಜಪವನ್ನು ಮಾಡಲಾಗುತ್ತಿದೆ.

ಮೈಸೂರಿನ ಅರುಣ್ ಯೋಗಿರಾಜ್ ರಾಮಲಲಾನ ಮೂರ್ತಿಯನ್ನು ರಚಿಸಿದ್ದಾರೆ. ಇದು 51 ಇಂಚಿನ ರಾಮಲಲ್ಲಾ ಮೂರ್ತಿ ಇದಾಗಿದೆ.

ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 10,000 ಸಿಸಿ³ ಕ್ಯಾಮೆರಾವನ್ನು ಸ್ಥಾಪಿಸಲಾಗಿದೆ. ಈ ಡ್ರೋನ್‌ ಕ್ಯಾಮೆರಾ ಮೂಲಕವೂ ಹದ್ದಿನ ಕಣ್ಣು ಇಡಲಾಗಿದೆ.

ಬಾಲಿವುಡ್ ಸ್ಟಾರ್ ಬಿಗ್ ಬಿ, ಉದ್ಯಮಿಗಳಾದ ಮುಖೇಶ್ ಅಂಬಾನಿ, ಗೌತಮ್ ಅದಾನಿ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!