ಹೊಸದಿಗಂತ ಆನ್ಲೈನ್ ಡೆಸ್ಕ್:
ಪರ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು ಎಂಬ ಕಾರಣಕ್ಕೆ ತಂದೆಯೇ ಮಗಳ ಕೊಲೆ ಮಾಡಿದ್ದಾನೆ.
ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಗ್ರಾಮವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತೆರಳಿದ್ದಾನೆ.
ಪಾಂಡೇತರ ಗ್ರಾಮದ ಸರ್ವೇಶ್ ಕುಮಾರ್ ಮಗಳ ರುಂಡ ಕಡಿದ ತಂದೆ. ಮಗಳ ತಲೆಯನ್ನು ಕೈಯಲ್ಲಿ ಹಿಡಿದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯ ಮಗಳ ರುಂಡ ಕತ್ತರಿಸಿ ಹತ್ಯೆ ಮಾಡಿದ್ದಾನೆ. ದೇಹ ಮನೆಯಲ್ಲಿದೆ, ರುಂಡ ನನ್ನ ಬಳಿ ಇದೆ ಎಂದು ಸ್ವತಃ ತಂದೆಯೇ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.