ದಿಗಂತ ವರದಿ ವಿಜಯಪುರ:
ಬಿಜೆಪಿ ಹುಟ್ಟಿಸಿದ ಕೂಸಿಗೆ ಕಾಂಗ್ರೆಸ್ ತಂದೆಯಾಗಲು ಹೊರಟಿರುವುದು ಹಾಸ್ಯಾಸ್ಪದ ಎಂದು ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ವ್ಯಂಗ್ಯವಾಡಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರ ಹೊರ ವಲಯದಲ್ಲಿ ಫುಡ್ ಪಾರ್ಕ್ ನಿರ್ಮಾಣಕ್ಕೆ ಈ ಹಿಂದೆಯೇ ಜಿಲ್ಲೆಯ ರೈತ ಮುಖಂಡರೊಂದಿಗೆ ಚರ್ಚೆ ನಡೆಸಿ, ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದೆ. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಬಳಿಕ ಕೃಷಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಶೇಷವಾಗಿ ನನ್ನ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿ ಯೋಜನೆಯಾದ್ದರಿಂದ ನಾನು ಕೂಡ ವಿಶೇಷವಾಗಿ ಕಾಳಜಿ ವಹಿಸಿದ್ದೆ. ಆದರೆ, ಕೆಲವರು ಅದನ್ನು ಹೈಜಾಕ್ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.