Tuesday, February 27, 2024

ಕ್ರಿಕೆಟ್ ಫ್ಯಾನ್ಸ್‌ಗೆ ಖುಷಿಸುದ್ದಿ: ಭಾನುವಾರ ರಾತ್ರಿ 11:45ವರೆಗೂ ಮೆಟ್ರೋ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಕಡೆಯ ಪಂದ್ಯ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ 11:45 ರವರೆಗೂ ಮೆಟ್ರೋ ಸೇವೆ ಲಭ್ಯವಿರಲಿದೆ. ನೇರಳೆ ಹಾಗೂ ಹಸಿರು ಮಾರ್ಗಗಳ ಟರ್ಮಿನಲ್ 4 ರಿಂದ ಹೊರಡುವ ರಾತ್ರಿ ರೈಲು 11:45 ರವರೆಗೆ ಇರಲಿದೆ.

ರಿಟರ್ನ್ ಜರ್ನಿ ಟಿಕೆಟ್‌ಗಳು ಭಾನುವಾರ ಮಧ್ಯಾಹ್ನ ಎರಡು ಗಂಟೆಯಿಂದಲೇ ಲಭ್ಯವಾಗಲಿದೆ. ಇನ್ನು ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಹಾಗೂ ಎಂಜಿರೋಡ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ದಿನದ ಒಂದು ಪ್ರಯಾಣಕ್ಕೆ ಸೀಮಿತವಾಗಿರಲಿದೆ.

ಪೇಪರ್ ಟಿಕೆಟ್ ದರ 50 ರೂಪಾಯಿ ನಿಗದಿ ಮಾಡಲಾಗಿದೆ ಎಂದು ಮೆಟ್ರೋ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!