Tuesday, March 21, 2023

Latest Posts

ಕೋಳಿ ಆಸೆಗೆ ಚಿರತೆ ಬೋನಿಗೆ ಬಿದ್ದ ಭೂಪ: ವಿಡಿಯೋ ವೈರಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ (Uttar Pradesh) ಬುಲಂದ್‍ಶಹರ್‌ನಲ್ಲಿ (Bulandshahr) ಚಿರತೆಗಾಗಿ ಇರಿಸಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದ ಘಟನೆ ನಡೆದಿದೆ.

ಆತ ಚಿರತೆಯನ್ನು (Leopard) ಹಿಡಿಯಲು ಇರಿಸಿದ್ದ ಕೋಳಿಯನ್ನು ಹಿಡಿಯಲು ಹೋಗಿ ತಾನೇ ಬೋನಿನ ಒಳಗಡೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಆತನನ್ನ ಬಿಡುಗಡೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಬೋನ್ ಇರಿಸಿದ್ದ ಜಾಗಕ್ಕೆ ತೆರಳಿದಾಗ ಒಳಗೆ ಸಿಲುಕಿದ್ದ ವ್ಯಕ್ತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಬೋನಿನಲ್ಲಿ ಸೆರೆಯಾದ ವ್ಯಕ್ತಿಯ ವೀಡಿಯೋ ವೈರಲ್ ಆಗಿದೆ. ಬೋನಿನ ಸರಳುಗಳನ್ನು ಹಿಡಿದುಕೊಂಡು ರಕ್ಷಿಸುವಂತೆ ಕೂಗಿಕೊಳ್ಳುತ್ತಿರುವ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!