ಸಿಲಿಕಾನ್ ಸಿಟಿಯಲ್ಲಿ ಚಿರತೆ: ಇಂದೂ ನಡೆಯಲಿದೆ ಚೀತಾ ಕೂಂಬಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಚಿರತೆ ಭೀತಿ ಹೆಚ್ಚಾಗಿದ್ದು, ಚಿರತೆ ಹಿಡಿಯಲು ಇಂದು ಕೂಂಬಿಂಗ್ ನಡೆಸಲಾಗುವುದು. ತುರಹಳ್ಳಿ ಬಳಿ ಜಿಂಕೆ ಬೇಟೆಯಾಡಿರುವ ಚಿರತೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಜನ ಭಯಭೀತರಾಗಿದ್ದಾರೆ. ಕೋಡಿಪಾಳ್ಯ, ಚಟ್ಟಿಪಾಳ್ಯದ ಜನ ಭೀತಿಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ.

ಕಗ್ಗಲೀಪುರ-ತುರಹಳ್ಳಿ ಅರಣ್ಯ ಪ್ರದೇಶವಿದ್ದು, ಸೋಂಪುರ, ಶ್ರೀನಿವಾಸಪುರ, ಆರ್.ಆರ್, ನಗರ, ಮೈಲಸಂಧ್ರ, ಕೋಡಿಪಾಳ್ಯ, ಗೆಟ್ಟಿಗರಹಳ್ಳಿಯನ್ನು ಸುತ್ತುವರಿದಿದೆ. ಐಟಿಸಿ ಫ್ಯಾಕ್ಟರಿಯಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಇಂದು ಕೂಡ ಚೀತಾ ಕೂಂಬಿಂಗ್ ನಡೆಯುತ್ತಿದೆ. ಎರಡು ತಂಡಗಳು ಚಿರತೆಯ ಚಲನ ವಲನಗಳ ಮೇಲೆ ನಿಗಾ ಇಟ್ಟಿವೆ.

ಒಬ್ಬೊಬ್ಬರೇ ಓಡಾಡದಂತೆ ಸೂಚನೆ ನೀಡಲಾಗಿದ್ದು, ಭೀತಿ ನಡುವೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹೆದರುತ್ತಿದ್ದಾರೆ. ತುರಹಳ್ಳಿ ಬಳಿ ಚಿರತೆ ದಾಳಿ ಜಾಗದಲ್ಲಿ ಸಾರ್ವಜನಿಕರಿಗೆ ಪ್ರವೇಶ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಆದಷ್ಟು ಬೇಗ ಚಿರತೆ ಹಿಡಿದು ಕಾಡಿಗೆ ಬಿಡಲು ಅರಣ್ಯ ಇಲಾಖೆ ಸಾಹಸ ಪಡುತ್ತಿದೆ. ತುರಹಳ್ಳಿ ಅರಣ್ಯದ ಬಳಿ ಯಾರೂ ಓಡಾಡದಂತೆ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!