ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಡ್ಪಳ್ಳಿ: ಮುಳುಗು ಸೇತುವೆ ಎಂದೇ ಖ್ಯಾತಿ ಪಡೆದಿರುವ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆಲ್ಯಡ್ಕ ಸೇತುವೆಯು ಪ್ರಸಕ್ತ ವರ್ಷದ ಮಳೆಯಿಂದಾಗಿ ಎರಡನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದ್ದು, ಜನರ ಸಂಚಾರಕ್ಕೆ ಅಡಚಣೆ ಉಂಟು ಮಾಡಿದೆ.
ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಂದು ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಸಾರ್ವಜನಿಕರು ಸಂಚರಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಚೆಲ್ಯಡ್ಕ ಸೇತುವ ಮೇಲೆ ಚಲಿಸುವ ಖಾಸಗಿ ಬಸ್ಸುಗಳು ಸಂಟ್ಯಾರ್ ಮಾರ್ಗವಾಗಿ ಪುತ್ತೂರಿಗೆ ತೆರಳಿವೆ. ಈ ಮಾರ್ಗದಲ್ಲಿ ಬಸ್ಸು ಸಂಚಾರ ಇಲ್ಲದ ಕಾರಣ ಸಾರ್ವಜನಿಕರು ಇಂದು ಬೆಳಗ್ಗೆ ಪರದಾಡಿದ್ದು, ಪರ್ಯಾಯ ಮಾರ್ಗದಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ.