ವಾಹನದಿಂದ ರಸ್ತೆಯುದ್ದಕ್ಕೂ ಚೆಲ್ಲಿದ ರಾಸಾಯನಿಕ: ಸಾರ್ವಜನಿಕರಲ್ಲಿ ದಿಢೀರ್ ಕಾಣಿಸಿಕೊಂಡ ರೋಗ ಲಕ್ಷಣ

ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ, ಸಿದ್ದಾಪುರ ಭಾಗದಲ್ಲಿ ಮಂಗಳವಾರ ಬೆಳಗ್ಗೆ ಸಾರ್ವಜನಿಕರಲ್ಲಿ ದಿಢೀರನೆ ಕೆಮ್ಮು, ಸೀನು, ಕಣ್ಣು ಉರಿ, ತುರಿಕೆಯಂತಹ ರೋಗ ಲಕ್ಷಣಗಳು ಕಂಡು ಬಂದಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಕುಶಾಲನಗರದಿಂದ ಸಿದ್ದಾಪುರ ಮಾರ್ಗವಾಗಿ ತೆರಳುತ್ತಿದ್ದ ವಾಹವೊಂದರಿಂದ ಯಾವುದೋ ರಾಸಾಯನಿಕ ಸೊರಿಕೆಯಾಗಿರುವುದೇ ಇದಕ್ಕೆ ಕಾರಣವೆನ್ನಲಾಗಿದ್ದು, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಘವೇಂದ್ರ ಅವರು ರಾಸಾಯನಿಕ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಮುಂದಾಗಿದ್ದಾರೆ.
ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ನೇತೃತ್ವದ ಪೊಲೀಸ್ ತಂಡ ಲಿಕ್ವಿಡ್ ಚೆಲ್ಲಿರುವ ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದು, ಅವರು ನೀಡಿದ ಮಾಹಿತಿಯನ್ನಾಧರಿಸಿ ವೀರಾಜಪೇಟೆ ಪೊಲೀಸರು ಮಾಕುಟ್ಟದಲ್ಲಿ ತಡೆಹಿಡಿದಿದ್ದಾರೆ.
ಇತ್ತ ಸಾರ್ವಜನಿಕರು ಮನೆಯಿಂದ ಹೊರ ಬರಲು ಹೆದರುತ್ತಿದ್ದು, ಮಾಸ್ಕ್ ಧರಿಸಿ ಓಡಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!