ಭರ್ಜರಿ ಗೆಲುವಿನೊಂದಿಗೆ ಐಪಿಎಲ್ 18ನೇ ಆವೃತ್ತಿಗೆ ವಿದಾಯ ಹೇಳಿದ ಚೆನ್ನೈ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಗುಜರಾತ್‌ ಟೈಟಾನ್ಸ್‌ ವಿರುದ್ಧ 83 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.‌ ಈ ಮೂಲಕ ತನ್ನ ಕೊನೆಯ ಪಂದ್ಯದಲ್ಲಿ ಅದ್ಭುತ ಗೆಲುವಿನೊಂದಿಗೆ 18ನೇ ಆವೃತ್ತಿಗೆ ವಿದಾಯ ಹೇಳಿದೆ.

ಈಗಾಗಲೇ ಗುಜರಾತ್‌ ಟೈಟಾನ್ಸ್‌, ಪಂಜಾಬ್‌ ಕಿಂಗ್ಸ್‌, ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ಪ್ಲೇ ಆಫ್‌ ಪ್ರವೇಸಿವೆ. ಆದ್ರೆ ನಾಲ್ಕು ತಂಡಗಳ ನಡುವೆ ನಂ.1 ಪಟ್ಟಕ್ಕೆ ಹಣಾಹಣಿ ನಡೆಯುತ್ತಿದೆ. ಸದ್ಯ 14 ಪಂದ್ಯಗಳಲ್ಲಿ 9 ಗೆಲುವಿನೊಂದಿಗೆ 18 ಅಂಕ ಪಡೆದುಕೊಂಡಿರುವ ಟೈಟಾನ್ಸ್‌ ಅಗ್ರಸ್ಥಾನದಲ್ಲಿದೆ. ಉಳಿದ ಮೂರು ತಂಡಗಳಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವ ಕಾರಣ ಗುಜರಾತ್‌ ಟೈಟಾನ್ಸ್‌ಗೆ ನಂ.1 ಸ್ಥಾನ ತಪ್ಪುವ ಆತಂಕದಲ್ಲಿದೆ.

ಮೊದಲು ಟಾಸ್ ಗೆದ್ದ ಸಿಎಸ್‌ಕೆ ತಂಡ ಬ್ಯಾಟಿಂಗ್ ಆಯ್ದುಕೊಂಡು 20 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 230 ರನ್ ಕಲೆ ಹಾಕಿತು. 231 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಗುಜರಾತ್‌ ಟೈಟಾನ್ಸ್‌ 18.3 ಓವರ್‌ಗಳಿಗೆ 147 ರನ್‌ಗಳಿಗೆ ಸರ್ವಪತನ ಕಂಡಿತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!