ಮಿಚಾಂಗ್ ಚಂಡಮಾರುತಕ್ಕೆ ಚೆನ್ನೈ ತತ್ತರ: ಮಹಾ ಪ್ರವಾಹಕ್ಕೆ ಕನಿಷ್ಠ 7 ಮಂದಿ ಸಾವು, ನಾಳೆಯೂ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ಚೆನ್ನೈ ತತ್ತರಿಸಿದ್ದು, 48 ಗಂಟೆಗಳಲ್ಲಿ ಸುಮಾರು 40 ಸೆಂ.ಮೀ ಮಳೆಯಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.

ತಮಿಳುನಾಡಿನ ಹೆಚ್ಚಿನ ರಸ್ತೆಗಳು ಜಲಾವೃತಗೊಂಡವು. ಬಿರುಸಿನ ಗಾಳಿಯಿಂದ ಮರಗಳು ಉರುಳಿದವು. ಕಾರ್ ಗಳು ಮತ್ತು ಇತರ ವಾಹನಗಳು ಕೊಚ್ಚಿ ಹೋಗಿವೆ. ಬಿಡುವು ನೀಡದೆ ನೀರು ನುಗ್ಗಿದ್ದರಿಂದ ನಗರದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.
ಅವಘಡದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. ಚೆನ್ನೈ ಪೊಲೀಸರು ನಗರದಾದ್ಯಂತ ಐದು ಸಾವುಗಳ ಖಚಿತಪಡಿಸಿದ್ದಾರೆ.

ಡಿಸೆಂಬರ್ 5 ರಂದು ರಜೆ
ಡಿಸೆಂಬರ್ 5 ರಂದು ಸಹ ಸಾರ್ವಜನಿಕ ರಜೆ ಎಂದು ಸರ್ಕಾರ ಘೋಷಿಸಿದೆ. ಭಾರೀ ಮಳೆ ಮತ್ತು ಅದರ ಪರಿಣಾಮದಿಂದಾಗಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಡಿಸೆಂಬರ್ 5 ಮಂಗಳವಾರದಂದು ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರ ವಿನಂತಿಸಿದೆ.
ಚೆನ್ನೈ ವಿಮಾನ ನಿಲ್ದಾಣವನ್ನು ಡಿಸೆಂಬರ್ 5 ರಂದು ಬೆಳಿಗ್ಗೆ 9 ಗಂಟೆಯವರೆಗೆ ಮುಚ್ಚಲಾಗುವುದು ಎಂದು ಹೇಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!