ಚೆನ್ನೈ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ಅಪಘಾತ: ರಕ್ಷಣಾ ಕಾರ್ಯಕ್ಕೆ ನೆರವು ನೀಡಲು ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚೆನ್ನೈ -ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ಹಾಗೂ ಸರಕು ಸಾಗಾಣೆ ರೈಲು ಮುಖಾಮುಖಿ ಡಿಕ್ಕಿಯಾಗಿದೆ.ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಇದುವರೆಗೆ 179 ಜನರು ಗಾಯಗೊಂಡಿದ್ದಾರೆ ಮತ್ತು 50 ಜನರು ಸಾವನ್ನಪ್ಪಿದ್ದಾರೆ.ಆದಾಗ್ಯೂ, ರೈಲ್ವೆ ಇನ್ನೂ ಯಾವುದೇ ಮಾಹಿತಿ ಬಿಡುಗಡೆ ಮಾಡಿಲ್ಲ.

ಪ್ರಧಾನಿ ಮೋದಿ ಸಂತಾಪ
ರೈಲು ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದಾರೆ. ಇದೇ ವೇಳೆ ಈ ಅಪಘಾತದಲ್ಲಿ ಸಾವನ್ನಪ್ಪಿದಂತವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ, ದುಃಖಿತ ಕುಟುಂಬಗಳೊಂದಿಗೆ ನಾನು ಇದ್ದೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.ಈ ಘಟನೆ ಸಂಬಂಧ ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದೇನೆ. ಅಶ್ವಿನಿ ವೈಷ್ಣವ್ ಅವರಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

https://twitter.com/narendramodi/status/1664665463450918913?ref_src=twsrc%5Etfw%7Ctwcamp%5Etweetembed%7Ctwterm%5E1664665463450918913%7Ctwgr%5E6d6997182b8df413e1a1c912c2db846f1f893368%7Ctwcon%5Es1_&ref_url=https%3A%2F%2Feconomictimes.indiatimes.com%2Fnews%2Fnewsblogs%2Fdaily-news-and-latest-updates-live-2-june-2023%2Fliveblog%2F100689747.cms

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!