ಚೆನ್ನೈ-ಲಖನೌ ಮುಖಾಮುಖಿ: ಟಾಸ್ ಗೆದ್ದ ರಾಹುಲ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿಂದು ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ಚೆನ್ನೈ ಹಾಗೂ ಲಖನೌ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಲಖನೌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಚೆನ್ನೈ ಎದುರು ಕಣಕ್ಕಿಳಿದಿದೆ. ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರಚಿನ್ ರವೀಂದ್ರ ಬದಲಿಗೆ ಡ್ಯಾರೆಲ್ ಮಿಚೆಲ್ ತಂಡ ಕೂಡಿಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ಚೆನ್ನೈ ಬೌಲರ್‌ಗಳ ಮೇಲೆ ಸವಾರಿ ಮಾಡಿದ್ದ ಲಖನೌ ಈಗ ಮತ್ತೊಂದು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ ಚೆನ್ನೈ ಕ್ರೀಡಾಂಗಣದಲ್ಲಿ ಗೆಲ್ಲುವುದು ಎಷ್ಟು ಕಷ್ಟ ಎಂಬುದು ಲಖನೌಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಇಂದಿನ ಪಂದ್ಯ ಕೂಡಾ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!