ಮುಂಬೈ ಗೆ ಬಿಗ್ ಫೈಟ್ ನೀಡಲು ಚೆನ್ನೈ ಸಜ್ಜು: ಟಾಸ್ ಗೆದ್ದ ಪಾಂಡ್ಯ ಬೌಲಿಂಗ್​ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್ : 

ಮುಂಬೈನ ವಾಂಖೆಡೆ ಅಂತಾರಾಷ್ಟ್ರೀಯ ಮೈದಾನದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ಉಭಯ ತಂಡಗಳಿಗೆ ಇಂದಿನ ಪಂದ್ಯ ಅತ್ಯಂತ ಮಹತ್ವದ್ದು ಎನಿಸಿದೆ. ಅದರಲ್ಲೂ ವಿಶೇಷವಾಗಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈಗಾಗಲೇ ಚೆನ್ನೈ ಆಡಿರುವ 7 ಪಂದ್ಯಗಳಲ್ಲಿ ಕೇವಲ 2ನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಇತ್ತ ಮುಂಬೈ ಇಂಡಿಯನ್ಸ್ ತಂಡ ಸದ್ಯ 7 ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರಿಯಾನ್ ರಿಕೆಲ್ಟನ್(ವಿಕೀ), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ಅಶ್ವನಿ ಕುಮಾರ್ ಸ್ಥಾನ ಪಡೆದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಶೇಕ್ ರಶೀದ್, ರಚಿನ್ ರವೀಂದ್ರ, ಆಯುಷ್ ಮ್ಹಾತ್ರೆ, ರವೀಂದ್ರ ಜಡೇಜಾ, ಶಿವಂ ದುಬೆ, ವಿಜಯ್ ಶಂಕರ್, ಜೇಮಿ ಓವರ್‌ಟನ್, ಎಂಎಸ್ ಧೋನಿ ( ನಾಯಕ\ ವಿಕೀ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಶ ಪತಿರಣ ಸ್ಥಾನ ಪಡೆದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!