ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಚೆನ್ನೈನ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಚೆನ್ನೈ ಜಿಲ್ಲೆಯ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಚೆನ್ನೈನ ಜಿಲ್ಲಾಧಿಕಾರಿ ರಶ್ಮಿ ಸಿದ್ಧಾರ್ಥ್ ಝಾಗಡೆ ಆದೇಶ ಹೊರಡಿಸಿದ್ದಾರೆ.
ಚೆನ್ನೈನಲ್ಲಿ ಮಂಗಳವಾರ ಮಧ್ಯಾಹ್ನದಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಅರಿಯಲೂರು, ತಂಜಾವೂರು, ವಿಲ್ಲುಪುರಂ, ತಿರುವಣ್ಣಾಮಲೈ, ನಾಗಪಟ್ಟಿಣಂ, ತಿರುವರೂರು ಮತ್ತು ಕಡಲೂರು ಜಿಲ್ಲೆಗಳಲ್ಲಿ ಭಾರಿ ಮಳೆ ಕಾರಣ ಪರಿಸ್ಥಿತಿ ನೋಡಿಕೊಂಡು ಶಾಲೆಗಳಿಗೆ ರಜೆ ಘೋಷಿಸಲು ಅಧಿಕಾರಿಗಳು ತಿಳಿಸಿದ್ದಾರೆ.