ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಐಪಿಎಲ್ನ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಚೆನ್ನೈ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯಾ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಇದು ಮುಂಬೈ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಕಿರಣ್ ಪೋಲಾರ್ಡ್ ಇಂದು ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದಾರೆ.
ತಂಡಗಳ ವಿವರ: ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್(ವಿ), ಸೂರ್ಯಕುಮಾರ್ ಯಾದವ್, ಅನ್ಮೋಲ್ಪ್ರೀತ್ ಸಿಂಗ್, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್, ರಾಹುಲ್ ಚಹರ್, ಆಡಮ್ ಮಿಲ್ನೆ, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಸೌರಭ್ ತಿವಾರಿ.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್ ಧೋನಿ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹ್ಯಾಜಲ್ವುಡ್