ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ಅಂತರಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಟೂರ್ನಿಯುದ್ದಕ್ಕೂ ಅತ್ಯುತ್ತಮ ಆಟವಾಡಿರುವ ರಾಜಸ್ಥಾನ ರಾಯಲ್ಸ್ ತಂಡವು ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಸಾಧಾರಣ ಮೊತ್ತ ಪೇರಿಸಿತು. ನಿಗದಿತ 20 ಓವರ್‌ಗಳಲ್ಲಿ ಆರ್‌ಆರ್ 5 ವಿಕೆಟ್ ಕಳೆದುಕೊಂಡು ಕೇವಲ 141 ರನ್ ಗಳಿಸಲಷ್ಟೇ ಶಕ್ತವಾಯಿತು
ಈ ಗುರಿಯನ್ನು ಬೆನ್ನತ್ತಿದ ಸಿಎಸ್‌ಕೆ 16 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ರಚಿನ್ ರವೀಂದ್ರ 27 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಡೆರಿಲ್ ಮಿಚೆಲ್ 22, ಮೋಯಿನ್ ಅಲಿ 10, ಶಿವಂ ದುಬೆ 18 ರನ್ ಗಳಿಸಿದರು. ನಾಯಕನ ಆಟವಾಡಿದ ಋತುರಾಜ್ ಗಾಯಕ್ವಾಡ್ 42 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದರೊಂದಿಗೆ ಆಡಿದ 13 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಅಂಕ ಗಳಿಸಿದ ಸಿಎಸ್‌ಕೆ ಪ್ಲೇಆಫ್ ಕನಸಿಗೆ ಹತ್ತಿರವಾಯಿತು.