ಬಿಜೆಪಿ ಬೆಂಬಲಿತರ ಪಾಲಾದ ಚೆನ್ನಯ್ಯನಕೋಟೆ ಗ್ರಾ.ಪಂ

ಹೊಸದಿಗಂತ ವರದಿ, ಮಡಿಕೇರಿ:
ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯತ್’ಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 17ಸ್ಥಾನಗಳ ಪೈಕಿ 16ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದು, ಒಂದು‌ ಸ್ಥಾನವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ಕಾಂಗ್ರೆಸ್’ನ ಭದ್ರ ಕೋಟೆಯಂತಿದ್ದ ಚೆನ್ನಯ್ಯನಕೋಟೆಯಲ್ಲಿ ಪ್ರಥಮ ಬಾರಿಗೆ ಕಮಲ ಅರಳಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ವೀರಾಜಪೇಟೆಯ ಮತ ಎಣಿಕೆ ಕೇಂದ್ರದ ಮುಂದೆಯೇ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!