ಕನ್ನಡ ಸಾಹಿತ್ಯ ಕ್ಷೇತ್ರದ ಹಿರಿಯ ಕೊಂಡಿ, ಕವಿ ನಾಡೋಜ ಡಾ. ಚನ್ನವೀರ ಕಣವಿ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಸಮನ್ವಯ ಕವಿ, ಕನ್ನಡ ಸಾಹಿತ್ಯ ಕ್ಷೇತ್ರದ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ (93) ಇಂದು ವಿಧಿವಶರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ
ಚನ್ನವೀರ ಕಣವಿ ಅವರು ಜೂನ್ 28 1928ರಲ್ಲಿ ಜನಿಸಿದವರು. ಕರ್ನಾಟಕ ವಿವಿಯಲ್ಲಿ ವ್ಯಾಸಂಗ ಪ್ರಸರಣ ಹಾಗೂ ಪ್ರಸಾರಾಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. 1949ರಲ್ಲಿ ತಮ್ಮ ಮೊದಲ ಕವನ ಸಂಕಲನವನ್ನು ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಇವರ ಕೊಡುಗೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳು ಇವರ ಮುಡಿ ಸೇರಿವೆ,
ಇವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು, ಇವರಿಗೆ ಹಂಪಿ ವಿವಿ ನಾಡೋಜ ಪ್ರಶಸ್ತಿ ನೀಡಿದೆ ಗೌರವಿಸಿದ್ದು, ಕರ್ನಾಟಕ ವಿವಿ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!