ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 63ನೇ ಪಂದ್ಯದಲ್ಲಿ ಸಿಎಸ್‌ಕೆ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾದವು. ಆದರೆ ಪಂದ್ಯದಲ್ಲಿ ಅಭಿಮಾನಿಗಳಿಗೆ ದೊಡ್ಡ ಶಾಕ್ ಎದುರಾಯಿತು. ಮಾಜಿ ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲೂ ಆಡುತ್ತಿಲ್ಲ ಎಂಬ ಸುದ್ದಿ ಚೆಪಾಕ್ ಮೈದಾನದಲ್ಲಿದ್ದ ಅಭಿಮಾನಿಗಳ ನಿರೀಕ್ಷೆಗಳಿಗೆ ತಣ್ಣೀರು ಎರಚಿದೆ.
ತವರಿನ ಕೊನೆಯ ಪಂದ್ಯದಲ್ಲೂ ಧೋನಿ ಗೈರು
ಈ ಸೀಸನ್‌ನಲ್ಲಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಇದುವರೆಗೆ ಒಂದೂ ಪಂದ್ಯ ಆಡಿರಲಿಲ್ಲ. ಚೆನ್ನೈನಲ್ಲಿ ನಡೆಯುತ್ತಿರುವ ಕೊನೆಯ ಲೀಗ್ ಪಂದ್ಯದಲ್ಲಿ ಆದರೂ ಧೋನಿ ಕಣಕ್ಕಿಳಿಯಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿತ್ತು. ಆದರೆ ಅವರು ತಂಡದ ಜೊತೆ ಮೈದಾನಕ್ಕೆ ಬಂದಿದ್ದರೂ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿಲ್ಲ.
ಇದನ್ನೂ ಓದಿ:
ರುತುರಾಜ್ ನೀಡಿದ ಸ್ಪಷ್ಟನೆ
ಟಾಸ್ ಬಳಿಕ ಮಾತನಾಡಿದ ನಾಯಕ ರುತುರಾಜ್ ಗಾಯಕ್ವಾಡ್, “ಧೋನಿ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಈ ಪಂದ್ಯದಲ್ಲೂ ವಿಶ್ರಾಂತಿ ನೀಡಲಾಗಿದೆ. ಆದರೆ ಕೊನೆಯ ಲೀಗ್ ಪಂದ್ಯದಲ್ಲಿ ಅವರು ಆಡುತ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದರು.
ಉಭಯ ತಂಡಗಳಲ್ಲಿ ಭರ್ಜರಿ ಪೈಪೋಟಿ
ಸಿಎಸ್‌ಕೆ ಪರ ರುತುರಾಜ್, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿದ್ದರೆ, ಹೈದರಾಬಾದ್ ಪರ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಹಾಗೂ ಪ್ಯಾಟ್ ಕಮಿನ್ಸ್ ತಂಡಕ್ಕೆ ಬಲ ತುಂಬಿದರು. ತವರಿನ ಅಭಿಮಾನಿಗಳ ಎದುರು ಗೆಲುವಿನೊಂದಿಗೆ ಮೆರೆಯಲು ಸಿಎಸ್‌ಕೆ ಕಣಕ್ಕಿಳಿದಿದೆ.



