‘ಪಠಾಣ್’ ಕೇಸರಿ ವಿವಾದದಲ್ಲಿ ಆ ದಿನಗಳ ಚೇತನ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾರುಖ್ ಖಾನ್ ನಟನೆಯ ‘ಪಠಾಣ್’ (Pathan) ಸಿನಿಮಾದ ಹಾಗೂ ಬೇಷರಮ್ ಹಾಡಿನ ಕುರಿತು ದೇಶದೆಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಅನೇಕರು ಚಿತ್ರವನ್ನು ಬಾಯ್ಕಾಟ್ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದರ ನಡುವೆ ಕನ್ನಡದ ನಟ, ಹೋರಾಟಗಾರ ಚೇತನ್ (Chetan) ಈ ವಿವಾದದ (Controversy) ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕೇಸರಿ ಹಿಂದುಗಳ ಸಂಕೇತವಲ್ಲ. ಹಿಂದುಗಳ ಬಣ್ಣ ಆಗಬಾರದು. ಕೇಸರಿ ಬಣ್ಣ ತ್ಯಾಗದ ಸಂಕೇತ. ಅದು ಭಾರತದ ರಾಷ್ಟ್ರ ಧ್ವಜದಲ್ಲೂ ಇದೆ. ಹಸಿರು ಬಣ್ಣ ಕೂಡ ಅಷ್ಟೇ, ಅದು ಕೂಡ ಯಾರದೋ ಬಣ್ಣವಲ್ಲ. ಇದೊಂದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಷ್ಟೇ’ಎಂದು ಪ್ರತಿಕ್ರಿಯಿಸಿದ್ದಾರೆ.

ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿದ್ದರು. ಆ ಹಾಡಿನ ಸಾಹಿತ್ಯದಲ್ಲೂ ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಕೂಡ ಹಾಡಿನಲ್ಲಿಯ ಕೆಲವು ಚಿತ್ರಿಕೆಗಳಿಗೆ ಕತ್ತರಿ ಹಾಕುವಂತೆ ಹೇಳಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!