Thursday, March 23, 2023

Latest Posts

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್​ ಆಪರೇಷನ್​ನಲ್ಲಿ ಭಾರತೀಯ ಕ್ರಿಕೆಟ್‌ನ ಅನೇಕ ವಿಷಯಗಳ ಬಗ್ಗೆ ಬಹಿರಂಗಪಡಿಸಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ತಮ್ಮ ಹುದ್ದೆಗೆ ಇಂದು ರಾಜೀನಾಮೆ ನೀಡಿದ್ದಾರೆ.

ಶರ್ಮಾ ಅವರು ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದು, ಅದನ್ನು ಜೈ ಶಾ ಕೂಡ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿದ ಬಳಿಕ ಇಡೀ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಲಾಗಿತ್ತು. ಬಳಿಕ ಕಳೆದ ತಿಂಗಳಷ್ಟೇ ಹಿರಿಯ ಆಯ್ಕೆ ಸಮಿತಿಯ ಮುಖ್ಯ ಆಯ್ಕೆಗಾರರಾಗಿ ಚೇತನ್ ಅವರನ್ನು ಮರು ನೇಮಕ ಮಾಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!